Featured StoryState News

ಜಟಾಪಟಿಗೆ ಬ್ರೇಕ್: ರಕ್ಷಾ ರಾಮಯ್ಯ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿದ್ದ ಜಟಾಪಟಿಗೆ ಬ್ರೇಕ್ ಬಿದ್ದಿದ್ದು ಈ ಹಿನ್ನೆಲೆಯಲ್ಲಿ ಒಂದು ಅವಧಿಯ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಶುಕ್ರವಾರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಬೆಳಗ್ಗೆ ನಗರದ ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ರಕ್ಷಾ ರಾಮಯ್ಯ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ ರಕ್ಷಾ ರಾಮಯ್ಯ ಹಾಗೂ ಮುಹಮ್ಮದ್ ನಲಪಾಡ್ ನಡುವೆ ಜಟಾಪಟಿ ನಡೆಯುತ್ತಿತ್ತು.ಚುನಾವಣೆಯಲ್ಲಿ ನಲಪಾಡ್ ಅತ್ಯಧಿಕ ಮತಗಳನ್ನು ಪಡೆದರೂ ಅವರ ಅಪರಾಧ ಹಿನ್ನೆಲೆಯ ಕಾರಣದಿಂದ ಅಧ್ಯಕ್ಷ ಸ್ಥಾನವನ್ನು ನೀಡಲಾಗಿರಲಿಲ್ಲ. ಇದು ಯುವ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿಗೆ ಕಾರಣವಾಗಿತ್ತು.

ಈ ನಿಟ್ಟಿನಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಡೆದ ಸಂಧಾನ ಸಭೆಯಲ್ಲಿ 50-50 ಸೂತ್ರವನ್ನು ಅನುಸರಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿತ್ತು.

ಅದರಂತೆ ಫೆಬ್ರವರಿ ತಿಂಗಳವರೆಗೆ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಇದಾದ ಬಳಿಕ ಮುಹಮ್ಮದ್ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button