Bidar

ಬೀದರ್: ಪರಸ್ಪರ ಡಿಕ್ಕಿಯಾಗಿ ತಡರಾತ್ರಿ ಹೊತ್ತಿ ಉರಿದ ಎರಡು ಲಾರಿ!

ಬೀದರ್ : ತಡರಾತ್ರಿ ಎರಡು ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ಹೊತ್ತಿ ಉರಿದ ಘಟನೆ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ಡಾಬಾ ಬಳಿ ನಡೆದಿದೆ.

ಒಂದು ಲಾರಿ ಸುಟ್ಟು ಸಂಪೂರ್ಣ ಭಸ್ಮವಾದರೆ ಇನ್ನೊಂದು ಲಾರಿ ಭಾಗಶಃ ಸುಟ್ಟು ಕರಕಲಾಗಿದೆ. ಮಹಾರಾಷ್ಟ್ರದ ಪು‌ಣೆಯಿಂದ ಹೈದ್ರಾಬಾದ್​ಗೆ ಲಾರಿಗಳು ತೆರಳುತ್ತಿದ್ದವು. ಮುಂದೆ ಸಾಗುತ್ತಿದ್ದ ಕಂಟೇನರ್​​ಗೆ ಹಿಂಬದಿಯಿಂದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಉಂಟಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಸವಕಲ್ಯಾಣ ಅಗ್ನಿಶಾಮಕ ತಂಡ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಸಂಚಾರಿ ಪಿಎಸ್ ಐ ಪುಷ್ಪಾ ಭೇಟಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ದುರ್ಘಟನೆ ನಡೆದಿದ್ದು, ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button