
ಪಾಲಿಕೆ ಚುನಾವಣೆ ಸುಸೂತ್ರವಾಗಿ ನಡೆಯಲು ಅಧಿಕಾರಿಗಳು ಶ್ರಮಿಸಬೇಕು :ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ
ಕಲಬುರಗಿ.ಆ.೧೩.(ಕ.ವಾ)-ಸೆಪ್ಟಂಬರ್ ೩ ರಂದು ನಡೆಯುವ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯನ್ನು ಸುಸೂತ್ರವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ನೇಮಕಗೊಂಡಿರುವ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ನಿರ್ದೇಶನ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಚುನಾವಣೆ ಸಿದ್ಧತೆ ಹಾಗೂ ಜವಾಬ್ದಾರಿಗಳ ಕುರಿತು ನಡೆದ ಚುನಾವಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಒಬ್ಬ ಚುನಾವಣಾಧಿಕಾರಿಗೆ ೫ ವಾರ್ಡ್ಗಳನ್ನು ನೀಡಲಾಗಿದ್ದು, ಪ್ರತಿಯೊಂದು ವಾರ್ಡಿನ ಸಂಪೂರ್ಣ ಮಾಹಿತಿ ತಮ್ಮಲ್ಲಿ ಇರಬೇಕು. ಸಂಬAಧಪಟ್ಟ ವಾರ್ಡ್ಗಳಿಗೆ ಭೇಟಿ ನೀಡಬೇಕು. ಆ. ೧೬ ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತಿರುವುದರಿಂದ ವೇಳಾಪಟ್ಟಿಯಿಂದ ಹಿಡಿದು ನಾಮಪತ್ರ ಹಿಂತೆಗೆಯುವವರೆಗೂ ನೀತಿ-ಸಂಹಿತೆ ಗಮನದಲಿಟ್ಟುಕೊಂಡು ಚುರುಕಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.
ನಾಮಪತ್ರ ಸಲ್ಲಿಕೆ ಸಮಯದಲ್ಲಿ ಅಭ್ಯರ್ಥಿಗಳು ನೀಡುವ ನಾಮಪತ್ರವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು. ಪ್ರಮುಖವಾಗಿ ನಮೂನೆ, ಘೋಷಣಾ ಪತ್ರ, ಜಾತಿ ಪ್ರಮಾಣ ಪತ್ರ, ಚಿರಾಸ್ತಿ, ಚರಾಸ್ತಿ, ಕ್ರಿಮಿನಲ್ ಹಿನ್ನೆಲೆ ಇನ್ನಿತರ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ ನಮೂನೆಯನ್ನು ತೆಗೆದುಕೊಳ್ಳಬೇಕು. ಚುನಾವಣಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದರು.
ಎಲ್ಲಾ ಹಂತದಲ್ಲೂ ಕೋವಿಡ್-೧೯ ಸುರಕ್ಷತಾ ನಿಯಮಗಳನ್ನು ಪಾಲನೆಯಾಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಸಭೆಯಲ್ಲಿ ಚುನಾವಣಾ ಮಾಸ್ಟರ್ ಟ್ರೇನರ್ ಡಾ. ಶಶಿಶೇಖರ್ ರೆಡ್ಡಿ ಅವರು ಅಧಿಕಾರಿಗಳಿಗೆ ಚುನಾವಣಾ ನಿಯಮ ಹಾಗೂ ಪಾಲನೆಗಳ ಕೈಪಿಡಿ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರ ವಣ ಕ್ಯಾಳ್, ಸಹಾಯಕ ಆಯುಕ್ತೆ ಮೋನಾ ರೂಟ್ ಹಾಗೂ ವಾರ್ಡ್ ಗಳ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.




