Featured Story

ಅಫಘಾನಿಸ್ತಾನದಿಂದ ಸೇನೆ ಹಿಂಪಡೆದ ಕ್ರಮ ಸಮರ್ಥಿಸಿದ ಜೊಯ್ ಬಿಡೆನ್!

ವಾಷಿಂಗ್ಟನ್: ಅಫ್ಘಾನಿಸ್ತಾನ ರಾಷ್ಟ್ರದಿಂದ ತಮ್ಮ ಸೇನೆಯನ್ನು ಹಿಂಪಡೆದುಕೊಂಡ ನಿರ್ಧಾರವನ್ನು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಸಮರ್ಥಿಸಿಕೊಂಡಿದ್ದಾರೆ.

ಅಫ್ಗಾನಿಸ್ತಾನವನ್ನು ತಾಲಿಬಾನಿಗರು ತಮ್ಮ ತೆಕ್ಕೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸೈನ್ಯ ಹಿಂತೆಗೆದುಕೊಂಡಿದ್ದನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತೊಮ್ಮೆ ಸಮರ್ಥನೆ ಮಾಡಿಕೊಂಡಿದ್ದಾರೆ. ಅಲ್ಲದೆ, ಅಫ್ಘಾನಿಸ್ತಾನದಲ್ಲಿ ಈಗಿನ ಪರಿಸ್ಥಿತಿಗೆ ಅಲ್ಲಿನ ನಾಯಕರೇ ಹೊಣೆ ಎಂದು ಈ ವೇಳೆ ಆರೋಪಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ನಾವು ಇಂಥಹ ಪರಿಸ್ಥಿತಿಯನ್ನು ನಿರೀಕ್ಷೆ ಮಾಡಿದ್ದೆವು. ಆದರೆ ಆ ಪರಿಸ್ಥಿತಿ ಇಷ್ಟು ಬೇಗ ಬರುತ್ತದೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಆಫ್ಘನ್ ನಾಯಕರೇ ಆ ದೇಶವನ್ನು ತಾಲಿಬಾನಿಗಳಿಗೆ ಬಿಟ್ಟುಕೊಟ್ಟು, ದೇಶವನ್ನು ತೊರೆದಿದ್ದಾರೆ. ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಸಾಕಷ್ಟು ಬೇಸರವನ್ನು ತಂದಿದೆ. ಆದರೆ. ನನ್ನ ನಿರ್ಧಾರದ ಕುರಿತು ಯಾವುದೇ ರೀತಿಯ ವಿಷಾದವಿಲ್ಲ ಎಂದಿದ್ದಾರೆ.

ಅಫ್ಘಾನಿಸ್ತಾನದಿಂದ ಸೇನೆಯನ್ನು ಹಿಂಪಡೆದ ನಿರ್ಧಾರವನ್ನು ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ. ವರ್ಷಗಳ ನಂತರ ಅಮೆರಿಕ ಪಡೆಗಳನ್ನು ಹಿಂತೆಗೆದುಕೊಳ್ಳಲು ಕಠಿಣ ಕ್ರಮ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಆಫ್ಘನ್​ ರಾಷ್ಟ್ರಕ್ಕೆ ಅಮೆರಿಕದ ಸೇನೆ ತೆರಳಿದ್ದು, ಆ ರಾಷ್ಟ್ರವನ್ನು ಕಟ್ಟುವ ಕೆಲಸಕ್ಕೆ ಅಲ್ಲ ಎಂದ ಬೈಡನ್, ಸೇನೆ ಅಲ್ಲಿಂದ ವಾಪಸ್ಸಾದರೂ ಭಯೋತ್ಪಾದನೆಯ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ. ​

ಅಮೆರಿಕ ಸೇನೆಯೊಂದಿಗೆ ಕೆಲಸ ಮಾಡಿದ ಅಮೆರಿಕದ ನಾಗರಿಕರು ಮತ್ತು ಆಫ್ಘನ್ ನಾಗರಿಕರನ್ನು ಕೆಲವೇ ದಿನಗಳಲ್ಲಿ ನಮ್ಮ ದೇಶಕ್ಕೆ ಕರೆಸಿಕೊಳ್ಳುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button