Featured StoryUttara Kannada

ಉ.ಕ | ಕಾರು ಮರಕ್ಕೆ ಡಿಕ್ಕಿ ; ಇಬ್ಬರ ಸಾವು

ಕಾರವಾರ : ದಾಂಡೇಲಿ‌ ವ್ಯಾಪ್ತಿಯ ಕರ್ಕಾ ಕ್ರಾಸ್‌ ಅಜಗಾಂವ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತವೊಂದರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಕಾರ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಧಾರವಾಡದ ಫಾರೂಖ್ ಸಾಬ್ ಹಾಗೂ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ. ಇನ್ನು ಗಂಭಿರವಾಗಿ ಗಾಯಗೊಂಡ ಕಾರ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಎಷ್ಟು ಭೀಕರವಾಗಿದೆ ಎಂದರೆ , ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದ್ದು, ಸಂಪೂರ್ಣವಾಗಿ ಜಜ್ಜಿಹೋಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.

Back to top button