Featured StoryState News

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಮಟ್ಟದ ಮುಜುಗರ ಎದುರಾಗಿದೆ.
ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಖಚಿತಪಡಿಸಿರುವ ರಾಮಲಿಂಗಾರೆಡ್ಡಿ, ಪಕ್ಷದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ರಾಜೀನಾಮೆ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಸುದೀರ್ಘ ರಾಜಕೀಯ ಪಯಣವನ್ನು ನೆನಪಿಸಿಕೊಂಡರು.
ನಾನು ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ ವಿನಃ ಕಾಂಗ್ರೆಸ್ ಪಕ್ಷಕ್ಕಲ್ಲ. ಕಳೆದ 53 ವರ್ಷಗಳಿಂದ ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಮತ್ತು ಪಕ್ಷದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಮಾಜಿ ಮುಖ್ಯಮಂತ್ರಿಗಳಾದ ಎಂ. ವೀರಪ್ಪ ಮೊಯ್ಲಿ ಹಾಗೂ ಎಸ್.ಎಂ. ಕೃಷ್ಣ ಅವರ ಸಂಪುಟಗಳಲ್ಲೂ ನಾನು ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ಆದರೆ, ನಾನೆಂದೂ ಯಾರ ಬಳಿಯೂ ಹೋಗಿ ನನಗೆ ಸಚಿವ ಸ್ಥಾನ ಕೊಡಿ ಎಂದು ಕೈಚಾಚಿಲ್ಲ” ಎಂದು ಮಾರ್ಮಿಕವಾಗಿ ನುಡಿದರು.

ಹಿರಿಯರು ಚರ್ಚಿಸಿ ಬಗೆಹರಿಸಲಿದ್ದಾರೆ: ಪ್ರಿಯಾಂಕ್ ಖರ್ಗೆ ವಿಶ್ವಾಸ
ಇದೇ ವೇಳೆ ನೂತನವಾಗಿ ಗೃಹ (ಗುಪ್ತಚರ ಹೊರತುಪಡಿಸಿ), ಐಟಿ-ಬಿಟಿ ಹಾಗೂ ಇ-ಆಡಳಿತ ಖಾತೆಗಳ ಜವಾಬ್ದಾರಿ ವಹಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

Back to top button