
Featured StoryNational
ಮೋದಿ ಭೇಟಿಯಾದ CM ಡಿಕೆಶಿ: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಭೇಟಿ ಕುರಿತು ಸಿಎಂ ಡಿ.ಕೆ ಶಿವಕುಮಾರ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರೊಂದಿಗೆ ‘ಈ ಉನ್ನತ ಮಟ್ಟದ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ಆದ್ಯತೆಗಳ ಕುರಿತು ಅತ್ಯಂತ ರಚನಾತ್ಮಕ ಚರ್ಚೆ ನಡೆಯಿತು.
ಪ್ರಮುಖವಾಗಿ ರಾಜ್ಯದ ಮೂಲಸೌಕರ್ಯ, ಹೂಡಿಕೆ, ನಗರ ಸಾರಿಗೆ, ನೀರಾವರಿ ಯೋಜನೆಗಳು, ನಾವೀನ್ಯತೆ ಹಾಗೂ ಜನರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಜನಕಲ್ಯಾಣ ಯೋಜನೆಗಳ ಕುರಿತು ಪ್ರಧಾನಿಯವರೊಂದಿಗೆ ಸಮಾಲೋಚನೆ ನಡೆಸಲಾಯಿತು’ ಎಂದು ಬರೆದುಕೊಂಡಿದ್ದಾರೆ.




