
Crime
ಮರ ಕಪಾತು ಮಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬೆಳೆಗಾರ ಸಾವು
ಮರ ಕಪಾತು ಮಾಡುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ ಕಾಫಿ ಬೆಳೆಗಾರರೊಬ್ಬರು ಅಸು ನೀಗಿರುವ ಘಟನೆ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಎರಡನೇ ರುದ್ರಗುಪ್ಪೆ ಜೋಡು ಭಗವತಿ ದೇವಾಲಯದ ಬಳಿ ಇಂದು ಅಪರಾಹ್ನ 4 ಗಂಟೆ ಸಮಯದಲ್ಲಿ ನಡೆದಿದೆ.ಕೊಂಗಂಡ ಚಂಗಪ್ಪ (ಅರುಣ) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.
ತನ್ನ ತೋಟದಲ್ಲಿ ಮರಕಪಾತು ಮಾಡುತ್ತಿದ್ದ ಚಂಗಪ್ಪ ಅವರು ಕತ್ತರಿಸಿದ ಕೊಂಬೆಯೊಂದು ತೋಟದ ಬಳಿ ಹಾದುಹೋಗಿದ್ದ 11 ಕೆವಿ ವಿದ್ಯುತ್ ಲೈನ್ ಗೆ ಸ್ಪರ್ಶಿಸಿದೆ. ಇದರಿಂದ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ
ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಅಧಿಕಾರಿ ಶ್ರೀಲತಾ ಅವರು ಘಟನೆ ನಡೆದ ಸ್ಥಳದಲ್ಲಿ ಮಹಜರು ನಡೆಸಿ ಮೃತದೇಹವನ್ನು ಶವಪರೀಕ್ಷೆಗಾಗಿ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ತರಲಾಗಿದೆ.
ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




