Crime

ಉ.ಕ ಜಿಲ್ಲೆಯಾದ್ಯಂತ 9,22,958 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 9,22,958 ಫಾರ್ಮ್ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 26977 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 6590 ಶಾಶ್ವತ ವಲಸೆ ಹಾಗೂ 17,774 ಮರಣ ಹೊಂದಿದ ಪ್ರಕರಣಗಳು, 2367 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

ಕಾರವಾರ : 1,59,753 ಫಾರ್ಮ್ ಗಣಕೀಕರಣ: ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,23,390 ಮತದಾರರಿದ್ದು, ಮತದಾರರ ಪಟ್ಟಿ ಸಮಗ್ರ ಪರಿಷ್ಕ್ಕರಣೆ-2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,59,753 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಕಾರವಾರ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 5347 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 949 ಶಾಶ್ವತ ವಲಸೆ ಹಾಗೂ 3648 ಮರಣ ಹೊಂದಿದ ಪ್ರಕರಣಗಳು ಹಾಗೂ 704 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

ಕುಮಟಾ 1,54,731 ಫಾರ್ಮ್ ಗಣಕೀಕರಣ : ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,23,390 ಮತದಾರರಿದ್ದು, ಮತದಾರರ ಪಟ್ಟಿ ಸಮಗ್ರ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,54,731 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಕುಮಟಾ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 7438 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 2236 ಶಾಶ್ವತ ವಲಸೆ ಹಾಗೂ 4582 ಮರಣ ಹೊಂದಿದ ಪ್ರಕರಣಗಳು ಹಾಗೂ 545 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

Back to top button