Crime

ಬೀದರ್: ಕೋವಿಡ್-19ಗಾಗಿ ಜನಾಂದೋಲನ ಕಾರ್ಯಕ್ರಮ: ಪೂರ್ವಭಾವಿ ಸಭೆ

ಬೀದರ್ ಅ. 16: ಕೋವಿಡ್-19ರ ಕುರಿತು ತಿಳಿವಳಿಕೆ ಮೂಡಿಸಲು ಜನಾಂದೋಲನ ಕಾರ್ಯಕ್ರಮ ನಡೆಸುವ ಕುರಿತಂತೆ ಚರ್ಚಿಸಲು ಪೂರ್ವಭಾವಿ ಸಿದ್ಧತಾ ಸಭೆಯು ಅಕ್ಟೋಬರ್ 16ರಂದು ಜಿಲ್ಲಾ ನ್ಯಾಯಾಲಯದ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದಂತೆ ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕಾಡಲೂರ ಸತ್ಯನಾರಾಯಣಾಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೋವಿಡ್-19 ಹಿನ್ನೆಲೆಯ ಜನಾಂದೋಲನ ಕಾರ್ಯಕ್ರಮವನ್ನು ಬೀದರ ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲೂಕು ಕೇಂದ್ರಗಳಲ್ಲಿ ಅಚ್ಚುಕಟ್ಟಾಗಿ ನಡೆಸುವ ಬಗ್ಗೆ ಸಮಗ್ರ ಚರ್ಚಿಸಲಾಯಿತು.
ಈ ವೇಳೆ ಮಾತನಾಡಿದ ಶ್ರೀ ಕಾಡಲೂರ ಸತ್ಯನಾರಾಯಣಾಚಾರ್ಯ ಅವರು, ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 17ರ ಬೆಳಗ್ಗೆ 10.15ಕ್ಕೆ ಜಿಲ್ಲಾ ನ್ಯಾಯಾಲಯದ ಕಚೇರಿ ಆವರಣದಲ್ಲಿ ಚಾಲನೆ ಸಿಗಲಿದೆ. ಈ ಕಾರ್ಯಕ್ರಮದ ನಿಮಿತ್ತ ಅರೇಕಾಲಿಕ ಸ್ವಯಂ ಸ್ವೇವಕರು ಮತ್ತು ವಕೀಲರು ತಂಡಗಳಾಗಿ ನಗರದ ಜನನಿಬಿಡ ಪ್ರದೇಶದಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದ್ದಾರೆ. ಈ ಕಾರ್ಯಕ್ರಮವು ಅಕ್ಟೋಬರ್ 17ರಂದು ಎಲ್ಲಾ ತಾಲೂಕುಗಳಲ್ಲಿ ನಡೆಯಲಿದೆ. ಆಯಾ ತಾಲೂಕುಗಳಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮವು ಪೊಲೀಸ್, ಆರೋಗ್ಯ ಮತ್ತು ವಾರ್ತಾ ಇಲಾಖೆಗಳು ಸಹಯೋಗದೊಂದಿಗೆ ನಡೆಯಲಿದೆ ಎಂದು ತಿಳಿಸಿದರು.
ಪೂರ್ವಭಾವಿ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿದ್ರಾಮ ಟಿ.ಪಿ. ಹಾಗೂ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಯಮನಪ್ಪ ಕೆ. ಹಾಗೂ ಇತರರು ಇದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button