
ಕೊಡಗು : ಕೋವಿಡ್ ಇಂದು 137 ಹೊಸ ಪ್ರಕರಣ
ಮಡಿಕೇರಿ ಅ.16 : ಜಿಲ್ಲೆಯಲ್ಲಿ ಶುಕ್ರವಾರ 137 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4232 ಆಗಿದ್ದು, 3459 ಮಂದಿ ಗುಣಮುಖರಾಗಿದ್ದಾರೆ. 714 ಸಕ್ರಿಯ ಪ್ರಕರಣಗಳಿದ್ದು, 59 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 536 ಆಗಿದೆ ಎಂದು ಮಾಹಿತಿ ನೀಡಿದರು.
117 ಪ್ರಕರಣಗಳು ಆರ್ಟಿಪಿಸಿಆರ್ ಮೂಲಕ ಹಾಗೂ 20 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 52 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 44 ಪ್ರಕರಣಗಳು ಆರ್ಟಿಪಿಸಿಆರ್ ಮತ್ತು 8 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 26 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಆರ್ಟಿಪಿಸಿಆರ್ ಮತ್ತು 12 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 59 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 59 ಪ್ರಕರಣಗಳು ಆರ್ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.




