ಉಡುಪಿ (ನ.19): ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಮುಂದುವರೆಯಲಿದೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಗಳಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿರುವುದರಿಂದ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನೂ ಹಲವು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಗುರುವಾರ ಬೆಳಗ್ಗೆಯಿಂದಲೇ ನಿರಂತರ ಮಳೆ ಸುರಿಯುತ್ತಿದ್ದು, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.