Crime

ಶಿರಾ: ನಾಳೆ ಮತದಾನ-330 ಮತಗಟ್ಟೆ ಸ್ಥಾಪನೆ

ತುಮಕೂರು, ನ 2 (ಯುಎನ್‍ಐ):- ನಾಳೆ, ಮಂಗಳವಾರ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ 7 ರಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ ಎಂದರು.
ಕ್ಷೇತ್ರದಲ್ಲಿ 1,10,281 ಪುರುಷರು ಮತ್ತು 1,05,434 ಮಹಿಳೆಯರು, ಇತರೆ 10 ಸೇರಿ ಒಟ್ಟು 2,ಲಕ್ಷದ 15 ಸಾವಿರಕ್ಕೂ ಹೆಚ್ಚು ಮತದಾರರು ನಾಳಿನ ಮತದಾನದಲ್ಲಿ ಹಕ್ಕು ಚಲಾಯಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button