
Crime
ಉತ್ತರ ಕೊಡಿ- ಬಿಎಸ್ವೈಗೆ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು,ನ 02(ಯುಎನ್ಐ):- ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ರಾಜ್ಯ ಸರ್ಕಾರದ ಬಳಿ ದುಡ್ಡಿ ಲ್ಲ.ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ,ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ.ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವ ರ ಜೇಬಿಗೆ ಹೋಯಿತಾ ? ಉತ್ತರ ಕೊಡಿ ಮುಖ್ಯಮಂತ್ರಿಗಳೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿ ದ್ದಾರೆ.
ಈ ಸಂಬಂದ ಸರಣಿ ಟ್ವೀಟ್ ಮಾಡಿರುವ ಅವರು,ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂ ದಾಗಿ ಹಾನಿಗೀಡಾದ ಮನೆಗಳು 2,24,000,ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಪರಿಹಾರ ಈ ಸರ್ಕಾರ ನೀಡುವುದು ಹೇಗೆ ಸಾಧ್ಯ? ಎಂದು ಕೇಳಿದ್ದಾರೆ.




