Crime
ಬೀದರ್: ಮತ ಎಣಿಕೆ ನವೆಂಬರ್ 10ಕ್ಕೆ
ಬೀದರ್, ನ.2:-: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2020ರ ಮತ ಎಣಿಕೆಯನ್ನು ನವೆಂಬರ್ 10 ರಂದು ಬೆಳಗ್ಗೆ 8 ಗಂಟೆಗೆ ನಿಗದಿಪಡಿಸಿ ಭಾರತ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.
ಆದ್ದರಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2020ರ ಮತ ಎಣಿಕೆಯನ್ನು ನವೆಂಬರ್ 10 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯವನ್ನು ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಗಣಿತ ವಿಭಾಗದ ಭಾಸ್ಕರ ಹಾಲನಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಕರ್ನಾಟಕ ಈಶಾನ್ಯ ಪದವೀಧರ ಮತಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರು ಕಲಬುರಗಿ ವಿಭಾಗದ ಕಲಬುರಗಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




