Crime
ಕೊಡಗು : ನ.3 ರಂದು ಅಂಚೆ ಕಚೇರಿ ಎದುರು ಪ್ರತಿಭಟನೆ
ಮಡಿಕೇರಿ ನ.2 : ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಕನಿಷ್ಠ ವೇತನ ನೀಡದೆ ಇರುವುದನ್ನು ಖಂಡಿಸಿ ನ.3 ರಂದು ವಿವಿಧ ಸಂಘಟನೆಗಳ ಸಹಕಾರದಿಂದ ಸ್ವಚ್ಛತಾ ಕಾರ್ಮಿಕರ ಸಂಘ ಮಡಿಕೇರಿಯ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ ಎಂದು ಪ್ಯೂಪಲ್ಸ್ ಮೂವ್ಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಸಂಘಟನೆಯ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಿ ಅಂಚೆ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಗುವುದೆಂದು ಅವರು ಹೇಳಿದ್ದಾರೆ.




