
Crime
ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ : ಸಿದ್ದರಾಮಯ್ಯ
ಬೆಂಗಳೂರು, ನ.4(ಯುಎನ್‍ಐ):- ಆರ್.ಆರ್. ನಗರದಲ್ಲಿ ಮತದಾನದ ಪ್ರಮಾಣ ಕಡಿಮೆ ಆಗಿರುವುದರಿಂದ ಕಾಂಗ್ರೆಸ್ ಲಾಭ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ತಮಗೆ ಸಿಕ್ಕ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ. ಮತದಾನದ ಪ್ರಮಾಣ ಕಡಿಮೆ ಆಗಿರುವುದು ನಮಗೆ ಲಾಭವಾಗಲಿದೆ ಎಂದರು.
ಭೂ ಸುಧಾರಣಾ ಕಾಯ್ದೆ ವಿರುದ್ಧ ಮತ್ತೆ ಹೋರಾಟ ನಡೆಸಲಾಗುವುದು. ಈ ಕಾಯ್ದೆಗಳ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು. ಸರ್ಕಾರಿ ನೌಕರರು ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಬಾರದೆಂದು ಎಲ್ಲಿಯೂ ಇಲ್ಲ. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.




