
Crime
ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಬೆಂಗಳೂರು,ನ.30:- ಕೊರೋನಾ ಆತಂಕದ ನಡುವೆಯೂ ಗ್ರಾಮಪಂಚಾಯತ್ ಚುನಾವಣೆಗೆ ಕೊನೆಗೂ ಘೋಷಣೆಯಾಗಿದೆ. ಡಿಸೆಂಬರ್ 22 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು ಡಿಸೆಂಬರ್ 27 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ರಾಜ್ಯದ ಒಟ್ಟು 5762 ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಮತಎಣಿಕೆ ನಡೆಯಲಿದೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಚುನಾವಣಾ ಆಯೋಗ ಗ್ರಾಮಪಂಚಾಯತ್ ಚುನಾವಣೆಯ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಿದೆ.ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯ ಜೊತೆಗೆ ಚುನಾವಣೆ ನಡೆಯಲಿದೆ.
ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಡಿಸೆಂಬರ್ 7 ರಂದು ಅಧಿಸೂಚನೆ ಹೊರಡಲಿದ್ದು, ಡಿಸೆಂಬರ್ 11 ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನಾಮಪತ್ರ ವಾಸಪ್ ಪಡೆಯಲು ಡಿಸೆಂಬರ್ 19 ರಂದು ಕೊನೆಯದಿನವಾಗಿದೆ. ಡಿಸೆಂಬರ್ 30 ರಂದು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.




