
Featured StoryUdupi
ಹೆಬ್ರಿಯ ಜಿಲ್ಲಾ ಪರಿಶಿಷ್ಟ ಪಂಗಡ ವರ್ಗದ ಕಿರಿಯ ಪ್ರಾಥಮಿಕ ಆಶ್ರಮ ಶಾಲೆಯ ಹಾಸ್ಟೇಲ್ನಲ್ಲಿ ಅಗ್ನಿ ಅವಘಡ – ನಾಲ್ಕು ವಿದ್ಯಾರ್ಥಿಗಳಿಗೆ ಗಾಯ
ಹೆಬ್ರಿ, ನ.11: ಹೆಬ್ರಿಯ ಜಿಲ್ಲಾ ಪರಿಶಿಷ್ಟ ಪಂಗಡ ವರ್ಗದ ಕಿರಿಯ ಪ್ರಾಥಮಿಕ ಆಶ್ರಮ ಶಾಲೆಯ ಹಾಸ್ಟೇಲ್ನಲ್ಲಿ ಅಗ್ನಿ ಅವಘಡದಿಂದ ನಾಲ್ವರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ವೇಳೆ ಸಂಭವಿಸಿದೆ.
ಗಾಯಗೊಂಡವರನ್ನು ರಾಯಚೂರು ಮೂಲದ ವಿದ್ಯಾರ್ಥಿಗಳಾದ ಶ್ರಿನಿವಾಸ್, ಅಮರೀಶ್, ವಿನೋದ್, ಮನೋಜ್ ಎಂದು ಗುರುತಿಸಲಾಗಿದೆ. ಈ ಮಕ್ಕಳನ್ನು ಹಾಸ್ಟೆಲ್ನಲ್ಲಿ ಕಸವನ್ನು ಹಾಕಿ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದು, ಈ ಸಂದರ್ಭ ಮಕ್ಕಳ ಕೈಯಲ್ಲಿದ್ದ ಸ್ಯಾನಿಟೈಸರ್ ಡಬ್ಬಿಗೆ ಬೆಂಕಿ ಹಿಡಿದು ಸ್ಪೋಟಗೊಂಡಿತು.
ಇದರಿಂದ ಮಕ್ಕಳು ಸುಟ್ಟ ಗಾಯಗೊಂಡಿದ್ದು, ಇವರನ್ನು ಮಣಿಪಾಲ, ಮಂಗಳೂರು ಹಾಗೂ ಹೆಬ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಹಾಸ್ಟೇಲ್ ಅಡುಗೆ ಕೆಲಸದ ಸಾವಿತ್ರಿ ಮತ್ತು ಹಾಸ್ಟೇಲ್ ವಾರ್ಡನ್ ಅವರ ನಿರ್ಲಕ್ಷವೇ ಕಾರಣ ಎಂದು ದೂರಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೆ.




