Crime

ಕೊಡಗು: ಅಕ್ರಮ ಮದ್ಯ ಸಾಗಾಟ : ಹಾಲೇರಿ ನಿವಾಸಿ ಬಂಧನ

ಮಡಿಕೇರಿ ಡಿ.15 : ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮಾಲು ಸಹಿತ ಸೆರೆ ಹಿಡಿಯುವಲ್ಲಿ ಸೋಮವಾರಪೇಟೆ ಅಬಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಸುಂಟಿಕೊಪ್ಪ ವ್ಯಾಪ್ತಿಯ ಹಾಲೇರಿ ನಿವಾಸಿ ಜಿ.ರವಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನಿಂದ 8.640 ಲೀ. ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಡಿ.13ರಂದು ರಾತ್ರಿ ಸೋಮವಾರಪೇಟೆ ವಲಯ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದರು. ಈ ಸಂದರ್ಭ ಕಾಂಡನಕೊಲ್ಲಿ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನ(ಕೆಎ.09-ಹೆಚ್‍ಸಿ.9575)ದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಅಬಕಾರಿ ಅಧಿಕಾರಿಗಳಿಗೆ ದೊರಕಿತ್ತು. ಈ ಮಾಹಿತಿ ಆಧರಿಸಿ ಕಾಂಡನಕೊಲ್ಲಿ ಜಂಕ್ಷನ್‍ನಲ್ಲಿದ್ದ ದ್ವಿಚಕ್ರ ವಾಹನವನ್ನು ಪರಿಶೀಲನೆ ನಡೆಸಿದ ಸಂದರ್ಭ ಜಿ.ರವಿ ಎಂಬಾತನ ಬೈಕ್‍ನಲ್ಲಿ 8.640 ಲೀ. ಮದ್ಯ ಪತ್ತೆಯಾಗಿತ್ತು.
ಆರೋಪಿಯನ್ನು ಸ್ಥಳದಲ್ಲೇ ಬಂಧಿಸಿದ ಅಬಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆತನ ವಿರುದ್ದ ಘೋರ ಪ್ರಕರಣ ದಾಖಲಿಸಿಕೊಂಡು ಅಕ್ರಮ ಮದ್ಯ ಮತ್ತು ಮದ್ಯ ಸಾಗಾಟಕ್ಕೆ ಬಳಸಿದ್ದ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರಪೇಟೆ ವಲಯ ಅಬಕಾರಿ ನಿರೀಕ್ಷಕಿ ಆರ್.ಎಂ. ಚೈತ್ರಾ, ರಕ್ಷಕರಾದ ಕೆ.ವಿ. ಸುಮತಿ, ಮಹಂತೇಶ್, ಹಿರೇಣ್ಣ ಮ್ಯಾಕೇರಿ ಮತ್ತು ಚಾಲಕ ಜಿತೇಂದ್ರ ಕಾರ್ಯಾಚರಣೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button