
Crime
ಬ್ರಾಹ್ಮಣರ ಅವಹೇಳನ ಪಠ್ಯ ತೆಗೆದು ಹಾಕಲು ಸುರೇಶ್ ಕುಮಾರ್ ಸೂಚನೆ
ಬೆಂಗಳೂರು,ಡಿ 17(ಯುಎನ್ಐ):- ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಾಠ-7ರ ಅಂಶಗಳನ್ನು ಉಲ್ಲೇಖಿಸಿ ಈ ಪಠ್ಯಭಾಗ ಬ್ರಾಹ್ಮಣ ಜನಾಂಗದ ಭಾವನೆಗಳನ್ನುಂಟು ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸಂಕೀರ್ಣ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




