Crime

ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?; ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು,ಡಿ 24(ಯುಎನ್‍ಐ):- ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಮಾತನಾಡಿದ ಅವರು,ಸಚಿವ ‘ಸುಧಾಕರ್ ಆಗಲಿ, ಬೇರೆ ಯಾರೇ ಆಗಲಿ ಯಾರೊಬ್ಬರ ಹೇಳಿಕೆಗೂ ನಾನು ಉತ್ತರ ನೀಡಲ್ಲ.ಕೊರೋನಾ ಸಮಯದಲ್ಲಿ ನಾವು ಸಹ ಕಾರ ಕೊಟ್ಟಿಲ್ಲ ಅಂತಾ ಮುಖ್ಯಮಂತ್ರಿಗಳು ಹೇಳಲಿ,ನೋಡೋಣ.ಅವರು ಮಾಡುವ ಭ್ರಷ್ಟಾಚಾರಗಳಿಗೆ ನಾ ವು ಸಹಕಾರ ಕೊಡಬೇಕಾ? ಅದರಲ್ಲಿ ಭಾಗಿಯಾಗಬೇಕಾ? ಇವರು ಪ್ರಚಾರಕ್ಕೋಸ್ಕರ ಏನು ಬೇಕೋ ಅದನ್ನು ಮಾ ಡುತ್ತಿದ್ದಾರೆ. ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಇವರಿಗೆ ಹೇಳೋರು, ಕೇಳೋರು ಯಾರೂ ಇಲ್ಲ ಎಂದು ಸಚಿವರ ವಿರುದ್ದ ಗುಡುಗಿದರು.
‘ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರಕಾರದ ಪ್ರತಿನಿಧಿಗಳು ಜನರನ್ನು ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಹಗಲು ವೇಳೆ ಓಡಾಟ ಮಾಡಬಹುದು,ರಾತ್ರಿ ಹೊತ್ತು ಕಫ್ರ್ಯು ಮಾಡುವುದೇಕೆ? ಇದರಿಂದ ಸೋಂಕು ನಿಯಂ ತ್ರಣ ಸಾಧ್ಯವಾ? ಈ ಬಗ್ಗೆ ಯಾರ ಬಳಿ ಚರ್ಚೆ ಮಾಡಿದ್ದಾರೆ? ರಾತ್ರಿ ವೇಳೆ ಸೋಂಕು ಹರಡುತ್ತದೆ ಎನ್ನುವುದಕ್ಕೆ ಪುರಾವೆ, ದಾಖಲೆಗಳಿವೆಯೇ? ಹಗಲು ವೇಳೆ ಹರಡುವುದಿಲ್ಲವೇ?’ ಹಗಲಲ್ಲಿ ಸಾವಿರಾರು ಜನ ಸೇರುತ್ತಾರೆ, ಆಗ ಕೊರೋನಾ ಸೋಂಕು ತಗುಲುವುದಿಲ್ಲವೇ? ಯಾವುದೋ ಕೆಲವು ವರ್ಗಗಳಿಗೆ ತೊಂದರೆ ಕೊಡಲು ತೀರ್ಮಾನ ಕೈಗೊಳ್ಳಬಾರದು. ಹೊಸ ವರ್ಷ ಆಚರಣೆ ಬೇರೆ ವಿಚಾರ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button