
Crime
ಜನವರಿ 15 ರ ನಂತರ ಪ್ರಥಮ ಪಿಯುಸಿ ತರಗತಿ : ಸುರೇಶ್ ಕುಮಾರ್
ಬೆಂಗಳೂರು, ಜ 3 (ಯುಎನ್‍ಐ):- ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ನಂತರ ಇದೀಗ ಜನವರಿ 15ರ ನಂತರ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್‍ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿಯುಸಿ ತರಗತಿಗಳ ಆರಂಭವಾಗಿರುವ ಹಿನ್ನೆಲೆ ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಇತರ ತರಗತಿಗಳನ್ನು ಆರಂಭಿಸಲಾಗುವುದು ಎಂದರು.




