Featured StoryUdupi

ಕಾರ್ಕಳ: ಹಾಸ್ಟೆಲ್’ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರ್ಕಳ: ಕುಂದಾಪುರ ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ‌

ಆತ್ಮಹತ್ಯೆ ಮಾಡಿಕೊಂಡಿರುವವರಿ ಕುಮಾರಿ ಸೀಮಾ (22) ಎಂದು ಗುರುತಿಸಲಾಗಿದೆ. ಇವರು  ನಿಟ್ಟೆ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಕಲಿಯುತ್ತಿದ್ದು, ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ಹಾಸ್ಟೆಲ್ ನ ರೂಮ್ ನಂಬ್ರ 227 ವಾಸಮಾಡಿಕೊಂಡಿದ್ದರು.

ನರದ  ಸಮಸ್ಯೆ ಹಾಗೂ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದು ಈ ಬಗ್ಗೆ ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರೂ ಗುಣಮುಖವಾಗದೇ ಇದ್ದು ಇದೇ ಕಾರಣದಿಂದ ಮನನೊಂದು ಈ ಹಿಂದೆ 4-5 ತಿಂಗಳ ಹಿಂದೆ ನಿದ್ರೆ ಮಾತ್ರೆ ಹಾಗೂ ಆರೋಗ್ಯದ ಸಮಸ್ಯೆಯ ಬಗ್ಗೆ ಇದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು. ಅದೇ ಕಾರಣದಿಂದ ಮನನೊಂದು ಹಾಸ್ಟೆಲ್ ನ ಕೊಠಡಿಯಲ್ಲಿನ ಫ್ಯಾನ್ ಗೆ ಚೂಡಿದಾರ್ ಶಾಲ್ ನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ಠಾಣೆ: ಯು.ಡಿ.ಆರ್ 14/2023ಕಲಂ: 174 ಸಿ.ಆರ್‌.ಪಿ.ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.  

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button