
Crime
ಬೈಂದೂರು: ಮಹಿಳೆ ಆತ್ಮಹತ್ಯೆ
ಬೈಂದೂರು: ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆ ಚರುಮಕ್ಕಿ ಎಂಬಲ್ಲಿ ಮಾ.8ರಮನದು ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಅಬ್ಬಕ್ಕ (63) ಎಂದು ಗುರುತಿಸಲಾಗಿದೆ.
ವರ್ಷದ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ವಿಚಾರದಲ್ಲಿ ಮನನೊಂದು ಮನೆಯ ಎದುರಿನ ಪಂಚಾಯತ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ಸಾರೆ. ಈ ಬಗ್ಗೆ ಬೈಂದೂರು ಠಾಣೆ ಪ್ರಕರಣ ದಾಖಲಿಸಲಾಗಿದೆ.




