Featured StoryUdupi

ಕಾಪು: ಬಸ್ ಢಿಕ್ಕಿ; ಶಾಲಾ ವಿದ್ಯಾರ್ಥಿನಿ‌ ಗಂಭೀರ ಗಾಯ

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಶಾಲಾ ಬಾಲಕಿ ಗಂಭೀರ ಗಾಯಗೊಂಡ ಘಟನೆ ಶನಿವಾರ (ಮಾ.11) ಬೆಳಗ್ಗೆ ನಡೆದಿದೆ.

ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಗಂಭೀರವಾಗಿ ಗಾಯಗೊಂಡಿದ್ದಾಳೆ.

ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button