Udupi

ರಾಹುಲ್ ಗಾಂಧಿ ಸದಸ್ಯತ್ವ ಅನರ್ಹ; ಉಡುಪಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ, ಮಾ.29: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಕಾನೂನು ಬಾಹಿರವಾಗಿ ಅನರ್ಹತೆಗೊಳಿಸಿರುವ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ್ಗಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಭುಜಂಗಪಾರ್ಕಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್ ಮಾತನಾಡಿ, ರಾಹುಲ್ ಗಾಂಧಿ ಸದಸ್ಯತ್ವ ಅನರ್ಹತೆಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಬಿಜೆಪಿ ಸರಕಾರ ಧ್ವೇಷದ ರಾಜಕಾರಣದ ಮೂಲಕ ರಾಹುಲ್ ಗಾಂಧಿ ವಿರುದ್ಧ ಕ್ರಮ ತೆಗೆದುಕೊಂಡಿದೆ. ಇದರ ವಿರುದ್ಧ ಕಾಂಗ್ರೆಸ್ ತೀವ್ರ ಹೋರಾಟ ಮಾಡಲಿದೆ ಎಂದು ತಿಳಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತ ನಾಡಿದರು. ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ದಿವಾಕರ್ ಕುಂದರ್, ಅಮೃತ್ ಶೆಣೈ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ಶಿವಾಜಿ ಸುವರ್ಣ, ಹರೀಶ್ ಕಿಣಿ, ಹಸನ್, ಸಂತೋಷ್ ಕುಲಾಲ್, ಜಯರಾಮ್ ನಾಯ್ಕಾ, ಜಯ ಕುಮಾರ್, ರೋಶನಿ ಒಲಿ ವೇರಾ, ಎಂ.ಪಿ.ಮೊದಿನಬ್ಬ. ಗಣೇಶ್ ನೆರ್ಗಿ ಮತ್ತಿತ್ತರು ಹಾಜರಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button