Featured StoryState News

ರಾಜ್ಯದ ಹಲವೆಡೆ 48 ಗಂಟೆಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನಲ್ಲಿ 2 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಕನಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕಲಬುರಗಿಯಲ್ಲಿ 38.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button