Featured StoryUdupi

ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕಾಪು ನಿವಾಸಿ ಮೃತ್ಯು

ಕಾಪು: ಎರಡು ವಾರಗಳ ಹಿಂದೆ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕಾಪು ನಿವಾಸಿಯೊಬ್ಬರು ಭಾನುವಾರ ಜುಬೈಲ್‌ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಮಹಮ್ಮದ್ ರಿಯಾಜ್ ಎಂದು ಗುರುತಿಸಲಾಗಿದ್ದು, ಕಾಪು ಸಮೀಪದ ಮೇಜೂರು ಕೊಂಬಗುಡ್ಡೆ ನಿವಾಸಿ.

ಮಾರ್ಚ್ 25 ರಂದು ಜುಬೈಲ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಿಯಾಜ್ ತೀವ್ರವಾಗಿ ಗಾಯಗೊಂಡು ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಇವರು ತಂದೆ-ತಾಯಿ ಹಾಗೂ ಪತ್ನಿಯನ್ನು ಅಗಲಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button