Featured StoryState News

ಮಾಜಿ ಉಪಮುಖ್ಯಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ(Laxman Savadi) ಬಿಜೆಪಿಗೆ ರಾಜೀನಾಮೆ

ಬೆಳಗಾವಿ: ಮಾಜಿ ಉಪಮುಖ್ಯಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ(Laxman Savadi) ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಣೆ ಮಾಡಿದರು.

ಬೆಳಗಾವಿಯ ಅಥಣಿಯಲ್ಲಿ ಇಂದು(ಏಪ್ರಿಲ್ 12) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು. ಆ ಗುರು ನನಗೆ ವಿಷ ಕೊಟ್ಟು ಕುಡಿ ಅಂದ್ರು ಕುಡಿಯುತ್ತೇನೆ. ಅವರಿಗೂ ನಾನು ಕ್ಷಮೆ ಕೇಳುತ್ತೇನೆ. ಅವರು ಹಾಕಿದ ಗೆರೆ ದಾಟುತ್ತಿದ್ದೇನೆ. ಅವರ ವಿಚಾರಧಾರೆ ದಾಟಿ ಹೋಗುತ್ತಿರುವುದರಿಂದ ಕ್ಷಮೆ ಇರಲಿ. ನಿಮ್ಮ ಅಂತರಾಳದಲ್ಲಿ ನನಗೆ ಆಶೀರ್ವಾದ ಬೇಕು ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button