
Crime
ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 8 ಜನ ಸಾವು
ಭೂಪಾಲ್, 12: ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 8 ಜನರು ಸಾವನ್ನಪ್ಪಿದ್ದು, ಇತರೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆಯಲ್ಲಿ ಇತರೆ 12ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ದುರ್ಘಟನೆ ಜರುಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ .
ಮೊರೆನಾ ಜಿಲ್ಲೆಯ ಚೈರಾ ಮಾನ್ಪುರ್ ಗ್ರಾಮದಲ್ಲಿ 7 ಮಂದಿ ಹಾಗೂ ಪಹವಾಲಿ ಗ್ರಾಮದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಅಸ್ವಸ್ಥರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಗ್ವಾಲಿಯರ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.ಈ ಸಂಬಂಧ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.




