Udupi

ಉಡುಪಿ | ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಸಂಪೂರ್ಣ ಭಸ್ಮ

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಇಂದ್ರಾಳಿ ಸಮೀಪ ಇಂದುನ ನಸುಕಿನ ವೇಳೆ ನಡೆದಿದೆ

ಕಿನ್ನಿಮುಲ್ಕಿಯ ಮುರಳಿಧರ್ ಎಂಬವರು ತನ್ನ ಕಾರನ್ನು ಮಣಿಪಾಲ ಕಡೆಯಿಂದ ಉಡುಪಿ ಕಡೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕಾರಿನ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದೆ.

ಕಾರಿನಲ್ಲಿ ಒಬ್ಬರೇ ಇದ್ದ ಇವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಆದರೆ ಬೆಂಕಿ ಇಡೀ ಕಾರಿಗೆ ಹಬ್ಬಿತು. ತಕ್ಷಣ ಮುರುಳಿದರ್ ಕಾರಿನಿಂದ ಇಳಿದು ಅಪಾಯದಿಂದ ಪಾರಾದರು.
ಕೂಡಲೆ ಸ್ಥಳಕ್ಕೆ ಆಗಮಿಸಿದ ಉಡುಪಿಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಬೆಂಕಿಯಿಂದ ಇಡೀ ಕಾರು ಸುಟ್ಟು ಭಸ್ಮ ವಾಗಿ ಲಕ್ಷಾಂತರ ನಷ್ಟ ಉಂಟಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button