Featured StoryState News

ಮಂಗಳೂರು ಉತ್ತರ ಕ್ಷೇತ್ರದಿಂದ ಇನಾಯತ್ ಅಲಿ ಮುಲ್ಕಿ ಅಭ್ಯರ್ಥಿ

ಬೆಂಗಳೂರು, ಏಪ್ರಿಲ್ 20: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಐವರು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಂಗಳೂರು ಉತ್ತರ ಕ್ಷೇತ್ರದಿಂದ ಇನಾಯತ್ ಅಲಿ ಮುಲ್ಕಿ ಅವರಿಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಹಿಂದಿನ ಪಟ್ಟಿಗಳಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಮಾಜಿ ಶಾಸಕ ಜೆಆರ್ ಲೋಬೋ ಅವರಿಗೆ ಟಿಕೆಟ್ ನೀಡಲಾಗಿತ್ತು. ಅಶೋಕ್‌ ಕುಮಾರ್‌ ರೈ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಮುನಿಯಾಲ್‌ ಉದಯ್‌ಕುಮಾರ್‌ ಶೆಟ್ಟಿ ಅವರಿಗೆ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ.

ಕರಾವಳಿಯಲ್ಲಿ ಮಂಗಳೂರಿನಿಂದ ಯು ಟಿ ಖಾದರ್, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್, ಬಂಟ್ವಾಳದಿಂದ ರಮಾನಾಥ್ ರೈ, ಸುಳ್ಯದಿಂದ ಕೃಷ್ಣಪ್ಪ ಜಿ, ಬೈಂದೂರಿನಿಂದ ಗೋಪಾಲ್ ಪೂಜಾರಿ, ಕಾಪು ವಿನಯ್ ಕುಮಾರ್ ಸೊರಕೆ, ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ದಿನೇಶ್ ಹೆಗಡೆ ಮೊಳಹಳ್ಳಿಗೆ ಟಿಕೆಟ್ ನೀಡಲಾಗಿದೆ. . ಪ್ರಸಾದ್ ರಾಜ್ ಕಾಂಚನ್ ಅವರಿಗೆ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಚುನಾವಣಾ ಟಿಕೆಟ್ ನೀಡಲಾಗಿತ್ತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button