Featured StoryUdupi

ಉಡುಪಿ ಕಾಂಗ್ರೆಸ್ ಅತ್ಯಂತ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ – ಪ್ರಮೋದ್ ಮಧ್ವರಾಜ್

ಉಡುಪಿ: ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಇತಿಹಾಸದಲ್ಲಿ ಪ್ರಥಮ ಬಾರಿಗೆ ಅತ್ಯಂತ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕರ್ನಾಟಕದಲ್ಲಿ ಅತ್ಯಂತ ಹೆಚ್ಚಿನ ಅಂತರದಲ್ಲಿ ಬಿಜೆಪಿ ಗೆಲ್ಲಬಹುದಾದ ಕ್ಷೇತ್ರ ಉಡುಪಿ ಎಂದು ಹೇಳಿದರು.

ವಿರೋಧ ಪಕ್ಷದ ಅಪಪ್ರಚಾರಗಳಿಗೆ ಕಿವಿಗೊಡದೆ ಬಿಜೆಪಿ ಅಭ್ಯರ್ಥಿ ಯಶ್ಫಾಲ್ ಸುವರ್ಣರನ್ನು ದೊಡ್ಡ ಅಂತರದಿಂದ ಗೆಲ್ಲಿಸಲು ಕರೆ ನೀಡಿದರು.

ಪ್ರಬಲ ಅಭ್ಯರ್ಥಿಯಾದ ನನ್ನನ್ನೇ ಜನ ಸೋಲಿಸಿದ್ದರು. ಇನ್ನು ದುರ್ಬಲ ಅಭ್ಯರ್ಥಿಯನ್ನು ಗೆಲ್ಲುಸುತ್ತಾರೆಯೇ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button