Crime

`ಸಿಡಿ’ ಇಲ್ಲ `ಗೀಡಿ’ ಇಲ್ಲ ಎಂದ ಸವದಿ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಯಾವ ಸಿ.ಡಿ.ನೂ ಇಲ್ಲ, ಗೀಡಿನೂ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.
ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮುಖ್ಯಮಂತ್ರಿ ವಿರುದ್ಧ ಮಾಡಿರುವ ಆರೋಪಗಳ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಸಚಿವ ಸಂಪುಟ ವಿಸ್ತರಣೆಯಾದಾಗ ಎಲ್ಲ ಪಕ್ಷದಲ್ಲೂ ಭಿನ್ನಮತ ಅಥವಾ ಅಸಮಾಧಾನ ಸಹಜ. ಯಾರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲವೋ ಅವರಿಗೆ ಬೇಸರ ಆಗಿರುತ್ತದೆ. ಹೀಗಾಗಿ ಅಸಮಾಧಾನ ಹೊರಹಾಕುತ್ತಾರೆ. ಇದು ಬಿಜೆಪಿ ಕುಟುಂಬದ ಮಧ್ಯದಲ್ಲಿರುವ ಅಸಮಾಧಾನ. ಅದೆಲ್ಲವೂ ಮುಂದಿನ ದಿನಗಳಲ್ಲಿ ಸರಿ ಹೋಗಲಿದೆÀ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button