Featured StoryState News

ಒಡೆದ ಮನೆಯಾದ ಬಿಜೆಪಿ: ವಿರೋಧ ಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರು ಎಂಬ ಕುತೂಹಲ!

ಬೆಳಗಾವಿ:  ವಿಧಾನಸಭೆ ಚುನಾವಣೆ (Karnataka Assembly Elections 2023) ಬಿಜೆಪಿ ಮಕಾಡೆ ಮಲಗಿದ್ದು, ಇದರ ಬೆನ್ನಲ್ಲೇ ಇದೀಗ ಬಿಜೆಪಿ (BJP) ರಾಜ್ಯಾಧ್ಯಕ್ಷ ಬದಲಾವಣೆ ಹಾಗೂ ವಿರೋಧ ಪಕ್ಷ ನಾಯಕ ಯಾರು ಎನ್ನವ ಬಗ್ಗೆ ಕೇಸರಿ ಪಾಳಯದಲ್ಲಿ ಚರ್ಚೆಗಳು ನಡೆದಿವೆ.

ಮತ್ತೊಂದೆಡೆ ಬಿಜೆಪಿ ಭದ್ರಕೋಟೆಯಾಗಿದ್ದ ಬೆಳಗಾವಿಯಲ್ಲಿ(Belagavi) ಕಾಂಗ್ರೆಸ್ (Congress)ಪಾರುಪತ್ಯ ಮೆರೆದಿದೆ. ಜಿಲ್ಲೆಯಲ್ಲಿ 15 ಕ್ಷೇತ್ರ ಗೆದ್ದು ತರುತ್ತೇನೆ ಎಂದಿದ್ದ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಈಗ ಸೈಲೆಂಟ್ ಆಗಿದ್ದಾರೆ. ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಸಾರಥಿ ಯಾರಾಗುತ್ತಾರೆ ಎಂಬುವುದೇ ದೊಡ್ಡ ಸವಾಲಾಗಿದೆ.

ಬಿಜೆಪಿ ಭದ್ರಕೋಟೆಯಾಗಿದ್ದ ಬೆಳಗಾವಿಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಜಿಲ್ಲೆಯಲ್ಲಿ ಹದಿನೈದು ಕ್ಷೇತ್ರ ಗೆಲ್ಲುತ್ತೇವೆ ಎಂದು ಹಠಕ್ಕೆ ಬಿದ್ದು ಆಪ್ತರಿಗೆ ಟಿಕೆಟ್ ಕೊಡಿಸಿದ್ದ ರಮೇಶ್ ಜಾರಕಿಹೊಳಿ ಈಗ ಸೈಲೆಂಟ್ ಆಗಿದ್ದಾರೆ. ಉಳಿದಂತೆ ಈ ಬಾರಿ ಗೆದ್ದು ಬಂದ ನಾಯಕರು ತಮ್ಮ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇನ್ನು ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಬಲ ತುಂಬುತ್ತಿದ್ದ ಸುರೇಶ್ ಅಂಗಡಿ, ಉಮೇಶ್ ಕತ್ತಿ ಈಗಿಲ್ಲ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಮನೆ ಸೇರಿದ್ದಾರೆ. ಇನ್ನೇನು ಕೆಲವೇ ತಿಂಗಳಲ್ಲಿ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆ ಎದುರಾಗುವ ಸಾಧ್ಯತೆ ಇದೆ. ಇದಲ್ಲದೆ ಲೋಕಸಭೆ ಚುನಾವಣೆ ಕೂಡ ಹತ್ತಿರದಲ್ಲೇ ಇದೆ.. ಈ ಮಧ್ಯೆ ಬೆಳಗಾವಿ ಜಿಲ್ಲಾ ಬಿಜೆಪಿಯ ಸಾರಥಿ ಯಾರಾಗ್ತಾರೆ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿ ಮನೆ ಮಾಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button