
ಸಂಚಾರ ದಟ್ಟಣೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಯೋಜಿತ ರೀತಿ ಕಾರ್ಯನಿರ್ವಹಿಸುತ್ತಿಲ್ಲ: ಪ್ರತಾಪ್ ಸಿಂಹ
ಸಂಚಾರ ದಟ್ಟಣೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಯೋಜಿತ ರೀತಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಗುರುವಾರ ಹೇಳಿದ್ದಾರೆ. ಮೈಸೂರು: ಸಂಚಾರ ದಟ್ಟಣೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಯೋಜಿತ ರೀತಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಗುರುವಾರ ಹೇಳಿದ್ದಾರೆ.
ನಗರದ ಮಣಿಪಾಲ್ ಆಸ್ಪತ್ರೆ ಸಿಗ್ನಲ್ ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಬಳಿಕ ಪ್ರತಾಪ್ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೈಸೂರು ಪ್ರವೇಶ ದ್ವಾರದಲ್ಲಿ ಸಂಚಾರ ದಟ್ಟಣೆ ಕಂಡು ಬರುತ್ತಿದ್ದು, ಇದರಿಂದಾಗಿ ದಶಪಥಗಳ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಯೋಜಿತ ರೀತಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದ್ದಾರೆ. ಮೇಲ್ಸೇತವೆ ನಿರ್ಮಾಣ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಮಾಹಿತಿಗಳೂ ಬಂದಿಲ್ಲ.
ಯೋಜನೆಗೆ ತಾಂತ್ರಿಕ ದೋಷಗಳು ಕಂಡು ಬಂದಿದೆ. ಯೋಜನೆಗೆ ಅನುಮತಿ ನೀಡಲು ಕೇಂದ್ರ ಚಿಂತನೆ ನಡೆಸುತ್ತಿದ್ದು, ಎನ್ಎಚ್ಎಐ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.




