Crime

ನೂತನ ಸಂಸತ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್​ ಭವನವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು.

ನೂತನ ಸಂಸತ್ ಭವನ  ಹಲವು ವಿಶೇಷತೆಗಳನ್ನು ಒಳಗೊಂಡಿದೆ. ತ್ರಿಕೋನ ಆಕಾರದ 4 ಅಂತಸ್ತಿನ ಕಟ್ಟಡದ ವಿಸ್ತೀರ್ಣ 64,500 ಚದರ ಮೀಟರ್ ಇದ್ದು, ಕಟ್ಟಡದಲ್ಲಿ 1,280 ಸಂಸದರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಜ್ಞಾನದ್ವಾರ, ಶಕ್ತಿದ್ವಾರ, ಕರ್ಮದ್ವಾರ ಎಂಬ 3 ಪ್ರಮುಖ ದ್ವಾರಗಳನ್ನು ನಿರ್ಮಾಣ ಮಾಡಲಾಗಿದೆ. ಸಂಸದರು, ವಿಐಪಿ ಸಂದರ್ಶಕರು, ಅಧಿಕಾರಿಗಳಿಗಾಗಿ ಪ್ರತ್ಯೇಕ ದ್ವಾರ ನಿರ್ಮಿಸಲಾಗಿದೆ.

ನೂತನ ಸಂಸತ್​​ ಭವನದಲ್ಲಿ ವಿವಿಧ ಧರ್ಮದ ಮುಖಂಡರಿಂದ ಪ್ರಾರ್ಥನೆ ಆರಂಭವಾಗಿದ್ದು, ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್​ ಸಿಂಗ್​, ಪ್ರಲ್ಹಾದ್​​ ಜೋಶಿ, ಎಸ್​​. ಜೈಶಂಕರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರು  ಭಾಗಿಯಾಗಿದ್ದಾರೆ. ಹಾಗೇ ಪ್ರಾರ್ಥನಾ ಸಭೆಯಲ್ಲಿ ಪಂಡಿತರು, ಸಾಧು ಸಂತರು ಪಾಲ್ಗೊಂಡಿದ್ದಾರೆ.

pm modi inaugurates new parliament 1 Crime

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button