Featured StoryState News

ಮಧುಗಿರಿ ಮೋದಿ ಸಹಿತ 495 ಆರೋಪಿಗಳ ವಿರುದ್ಧ ಇದ್ದ 260 ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರಕಾರ – ದಿ ಫೈಲ್ ತನಿಖಾ ವರದಿಯಲ್ಲಿ ಬಹಿರಂಗ

ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಮಧುಗಿರಿ ಮೋದಿ ಸಹಿತ 495 ಆರೋಪಿಗಳ ವಿರುದ್ಧ 260 ಪ್ರಕರಣ ಹಿಂಪಡೆದಿರುವ ಕುರಿತು ಆರ್.ಟಿ.ಐ ನಿಂದ ಬಹಿರಂಗಗೊಂಡಿರುವ ಕುರಿತು ದಿ ಫೈಲ್ ಮಾಧ್ಯಮ ವರದಿ ಮಾಡಿದೆ.

ಜನವರಿ 2023 ರಿಂದ ಮಾರ್ಚ್ ಅಂತ್ಯದವರೆಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಪ್ರಕರಣ ಹಿಂಪಡೆದಿರುವುದು ತನಿಖಾ ವರದಿಯಲ್ಲಿ ಬೆಳಕಿಗೆ ಬಂದಿದೆ. ಇದರಲ್ಲಿ ಬಿಜೆಪಿ ಕಾರ್ಯಕರ್ತರದ್ದೆ ಸಿಂಹಪಾಲು. ಅದರಲ್ಲೂ ಮುಖ್ಯವಾಗಿ ಮಾರಣಾಂತಿಕ ಹಲ್ಲೆಯಂತಹ ಗಂಭೀರ ಪ್ರಕರಣಗಳಿರುವುದು ಬೆಳಕಿಗೆ ಬಂದಿದೆ.

ಕೋಮು ಪ್ರಚೋದನೆ, ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದಿದ್ದ ಕೋಮು ಗಲಭೆ, ಸಾರ್ವಜನಿಕರ ನೆಮ್ಮದಿಗೆ ಭಂಗ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಸಾಮಾಜಿಕ ಆಂತರವಕಾಯ್ದುಕೊಳ್ಳದಿರುವುದು, ಲಾಕ್‌ಡೌನ್ ಸಂದರ್ಭದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಉಲ್ಲಂಘನೆ ಸೇರಿದಂತೆ ಮತ್ತಿತರೆ ಗಂಭೀರ
ಆರೋಪಗಳಡಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ
ವ್ಯಾಪ್ತಿಯಲ್ಲಿ ಐಪಿಸಿ, ಸಿಆರ್‌ಪಿಸಿ ಸೇರಿ ಮತ್ತಿತರೆ
ಕಾಯ್ದೆಯಡಿಯಲ್ಲಿ ನ್ಯಾಯಾಲಯದಲ್ಲಿ ದಂಡನಾ ಕ್ರಿಮಿನಲ್ ವಿಚಾರಣೆ ಮೊಕದ್ದಮೆಗಳು ನಡೆಯುತ್ತಿದ್ದರೂ ಹಿಂಪಡೆದುಕೊಂಡಿದೆ.

ಈ ಎಲ್ಲ ಮೊಕದ್ದಮೆಗಳನ್ನು ಹಿಂಪಡೆದುಕೊಳ್ಳಲು
ವಿಚಾರಣೆಯಿಂದ ಸಚಿವ ಸಂಪುಟ ಉಪ ಸಮಿತಿಯು ಶಿಫಾರಸ್ಸು ಮಾಡಿತ್ತು. ಪ್ರಕರಣ, ಮೊಕದ್ದಮೆಗಳನ್ನು
ವಿಚಾರಣೆಯಿಂದ ಹಿಂಪಡೆದುಕೊಂಡಿರುವುದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್’ ಆರ್‌ಟಿಐ ಅಡಿಯಲ್ಲಿ ಸರ್ಕಾರದ ಆದೇಶಗಳು ಮತ್ತು ಸಮಗ್ರ ನಡವಳಿಗಳನ್ನು ಪಡೆದುಕೊಂಡಿದೆ.

ದಿ ಫೈಲ್ ವರದಿ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button