Featured StoryNational

ಮುಸ್ಲಿಮ್ ಮಹಿಳೆಯರ ಬಗ್ಗೆ ಅವಹೇಳನ ಮಾಡಿದ ಆರ್.ಎಸ್.ಎಸ್ ಕಾರ್ಯಕರ್ತನ ಬಂಧನ

ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಪ್​ ಸ್ಟೇಟಸ್ ಹಾಕಿದ ಆರೋಪದಡಿ ಆರ್​ಎಸ್​ಎಸ್​ (RSS) ಕಾರ್ಯಕರ್ತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಚೂರು(Raichur) ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮುಸ್ಲೀಂ ಹೆಣ್ಮಕ್ಕಳು ಬರೀ ಮಕ್ಕಳನ್ನ ಹೇರುವ ಮಷಿನ್ ಎಂದು ಆರ್​ಎಸ್​ಎಸ್​ ಸ್ವಯಂ ಸೇವಕ ರಾಜು ಎಂಬಾತ ವಾಟ್ಸಪ್​ ಸ್ಟೇಟಸ್ ಹಾಕಿದ್ದ. ಇದು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಮುಸ್ಲಿಂ ಸಮಯದಾಯ ಜನ ಆಕ್ರೋಶಗೊಂಡು ಲಿಂಗಸುಗೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ರಾಜುನನ್ನು ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡ ಲಿಂಗಸೂರು ಪೊಲೀಸರು ಆರೋಪಿ ರಾಜುನನ್ನ ಬಂಧಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button