Featured StoryState News

200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಎಂದಿದ್ದ ಕಾಂಗ್ರೆಸ್‌ ಪಕ್ಷ ಈಗ ಷರತ್ತು ವಿಧಿಸಿದೆ; ಬಿಜೆಪಿಯಿಂದ ಪ್ರತಿಭಟನೆಗೆ ಕರೆ!

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆ (Karnataka Assembly Elections 2023) ಕಾಂಗ್ರೆಸ್ 135 ಸೀಟುಗಳೊಂದಿಗೆ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ಇದೀಗ ಸಿದ್ದರಾಮಯ್ಯನವರ(Siddaramaiah) ಸರ್ಕಾರದ ವಿರುದ್ಧ ಮೊದಲ ಪ್ರತಿಭಟನೆಗೆ ರಾಜ್ಯ ಬಿಜೆಪಿ(BJP) ಕರೆ ನೀಡಿದೆ.

ಕರ್ನಾಟಕ ಸರ್ಕಾರದ ಮೂರು ಜನವಿರೋಧಿ ನಿರ್ಧಾರಗಳನ್ನು ವಾಪಸ್‌ ಪಡೆಯಲು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು(ಜೂನ್ 05) ಮತ್ತು ನಾಳೆ(ಜೂನ್ 06) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ.

ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ತಿಳಿಸಿದ್ದಾರೆ. 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಎಂದಿದ್ದ ಕಾಂಗ್ರೆಸ್‌ ಪಕ್ಷ ಈಗ ಷರತ್ತು ವಿಧಿಸಿರುವುದು, ವಿದ್ಯುತ್‌ ಶುಲ್ಕ ಹೆಚ್ಚಿಸಿರುವುದು ಹಾಗೂ ಹಾಲಿನ ಪ್ರೋತ್ಸಾಹ ಧನ ಕಡಮೆಗೊಳಿಸುವ ನಿರ್ಧಾರಗಳನ್ನು ವಾಪ Kaಸ್‌ ಪಡೆಯುವಂತೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button