Bidar

ಬೀದರ್ ಜಿಲ್ಲಾ ಉಸ್ತವಾರಿ ಸಚಿವರಾಗಿ ಖಂಡ್ರೆ ನೇಮಕ


ವರದಿ : ಹಣಮಂತ ದೇಶಮುಖ
ಬೀದರ್ : ಜಿಲ್ಲೆಯ ಭಾಲ್ಕಿ ಮತಕ್ಷೇತ್ರದ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರನ್ನು ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ

ಭಾಲ್ಕಿ ಮತಕ್ಷೇತ್ರ ದಿಂದ ಸತತ ನಾಲ್ಕನೆಯ ಭಾರಿಗೆ ಗೆಲುವು ಸಾಧಿಸಿರುವ ಖಂಡ್ರೆ ಅವರು ಸಿದ್ದರಾಮಯ್ಯ ಸಚಿವ ಸಂಪುಟ ಸಲ್ಲಿ ಅರಣ್ಯ ಮತ್ತು ಪರಿಸರ ಖಾತೆಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು,ಇಂದು ಜಿಲ್ಲಾ ಉಸ್ತವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ

ಹರ್ಷ ವ್ಯಕ್ತಪಡಿಸಿದ ಸುನಿಲ್ ಕುಮಾರ್ ದೇಶಮುಖ್

ಔರಾದ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ದೇಶಮುಖ್ THG ಪ್ರತಿನಿಧಿ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದಂತಹ ಈಶ್ವರ್ ಖಂಡ್ರೆ ಅವರ ಅನುಭವಕ್ಕೆ ಸಂದ ಜಯವಾಗಿದೆ, ಮುಂಬರುವ ಸ್ಥಳೀಯ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಅತ್ಯಧಿಕ ಸ್ಥಾನಗಳು ಗೆದ್ದು ಇತಿಹಾಸ ದಾಖಲಾಗಲಿದೆ ಎಂದು ಭವಿಷ್ಯ ನೋಡುತ್ತಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button