Crime

ಶಿವಸೇನೆ ಪುಂಡಾಟ ಸಹಿಸಲ್ಲ ಎಂದ ಸಚಿವೆ

ಬೆಳಗಾವಿ,ಜ.21:- ಶಿವಸೇನೆ ಕಾರ್ಯಕರ್ತರ ಪುಂಡಾಟ ಸಹಿಸಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಮಾತುಗಳಲ್ಲಿ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಅಹಿತಕರ ಘಟನೆ ಸೃಷ್ಟಿಸಲು ಬಂದಲ್ಲಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಕೈಕಟ್ಟಿಕೊಂಡು ಕೂಡುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.
ಬೆಳಗಾವಿ ಪಾಲಿಕೆ ಕಚೇರಿ ಎದುರು ಭಗವಾ ಧ್ವಜಾ ಹಾರಿಸುವುದಾಗಿ ಹೇಳಿಕೊಂಡಿದ್ದ ಶಿವಸೇನೆ ಕಾರ್ಯಕರ್ತರು ಬೆಳಗಾವಿ ಗಡಿ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದವೂ ನಡೆದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button