Udupi

ಕಾರ್ಕಳ: ಕ್ಷುಲ್ಲಕ ವಿಚಾರಕ್ಕೆ ಆರಂಭಗೊಂಡ ದಂಪತಿ ಜಗಳ ಸಾವಿನಲ್ಲಿ ಅಂತ್ಯ!

ಕಾರ್ಕಳ, ಜೂ. 25: ಕ್ಷುಲ್ಲಕ ವಿಚಾರಕ್ಕೆ ಆರಂಭಗೊಂಡ ದಂಪತಿ ಜಗಳ ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಇಂದು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿ ನಡೆದಿದೆ.

ಮೃತರನ್ನು ಯಲ್ಲಾಪುರ ಮೂಲದ ಇಮ್ಯಾನುಲ್‌ ಸಿದ್ದಿ (40) ಹಾಗೂ ಅವರ ಪತ್ನಿ ಯಶೋಧಾ (32) ಎಂದು ಗುರುತಿಸಲಾಗಿದೆ.

ರವಿವಾರ ಬೆಳಗ್ಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ನೀರಿಗೆ ಹಾರಿದ ಪತಿ ಇಮ್ಯಾನುಲ್‌ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟರು.

ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್‌, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button