Crime
ಚಿತ್ರದುರ್ಗದಲ್ಲಿ ಮೋದಿ, ಯಡಿಯೂರಪ್ಪ ಅಣಕು ಶವಯಾತ್ರೆ
ಚಿತ್ರದುರ್ಗ, ಸೆ.28(ಯುಎನ್ಐ):- ಕೃಷಿ ಸಂಬಂಧಿತ ಮಸೂದೆಗಳನ್ನು ವಿರೋಧಿಸಿದ ಪ್ರತಿಭಟನಕಾರರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಣಕು ಶವಯಾತ್ರೆ ನಡೆಸಿದರು.
ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲೂ ರೈತರು ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಹೊಳಲ್ಕೆರೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ರೈತರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಣಕು ಶವಯಾತ್ರೆ ನಡೆಸಿದರು.
ಇದೇ ಸಂದರ್ಭದಲ್ಲಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೊಶ ವ್ಯಕ್ತ ಪಡಿಸಿದರು.




