Crime

ಅಕ್ರಮ ಗಣಿಗಾರಿಕೆಯಲ್ಲಿ ಪಾತ್ರ ಇಲ್ಲ ಎಂದ ಈಶ್ವರಪ್ಪ

ಶಿವಮೊಗ್ಗ, ಜ. 22:- ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ನನ್ನ ಪಾತ್ರವಿದೆ ಎಂದು ಆರೋಪಿಸಲಾಗುತ್ತಿದೆ. ಈ ಆರೋಪಗಳಲ್ಲಿ ಹುರುಳಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಗುರುವಾರ ರಾತ್ರಿ ಸಂಭವಿಸಿದ ಸ್ಪೋಟ ಕುರಿತು ತನಿಖೆ ನಡೆಯುತ್ತಿದೆ. ಸ್ಪೋಟಕ ಸ್ಥಳಕ್ಕೆ ತಜ್ಞರು ಆಗಮಿಸಿದ್ದು, ಎಲ್ಲಾ ನಿಟ್ಟಿನಲ್ಲಿಯೂ ತನಿಕೆ ಕೈಗೊಂಡಿದ್ದಾರೆ. ತನಿಖೆಯ ವರದಿಯ ನಂತ್ರ ಸ್ಪೋಟಕಕ್ಕೆ ಕಾರಣ ಏನು ಎನ್ನುವುದು ತಿಳಿಯುತ್ತದೆ ಎಂದು ಸಚಿವರು ತಿಳಿಸಿದರು.
ಅಕ್ರಮ ಕಲ್ಲುಗಣಿಗಾರಿಕೆಯಿಂದ ಸ್ಫೋಟ ಉಂಟಾಗಿಲ್ಲ. ದುರಂತ ಜರುಗಿದ ಕಲ್ಲು ಕ್ವಾರಿ ಸಕ್ರಮವಾಗಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ನನ್ನ ಪಾತ್ರ ಇಲ್ಲವೇ ಇಲ್ಲ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಕಾಂಗ್ರೆಸ್ ಅವಧಿಯಲ್ಲಿಯೂ ಗಣಿಗಾರಿಕೆ ನಡೆದಿತ್ತು. ಈಗ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿದ್ದೇವೆ ಎಂದು ಈಶ್ವರಪ್ಪ ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button