CrimeUdupi

ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ಬಂದಿದ್ದ ಮಹಿಳೆಯ ಚಿನ್ನಾಭರಣ ಕಳವು: ತೀರ್ಥಹಳ್ಳಿ ಮೂಲದ ಆರೋಪಿಯ ಬಂಧನ

ಕುಂದಾಪುರ: ಕಳೆದ ತಿಂಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ಬಂದಿದ್ದ ಮಹಿಳೆಯ ಚಿನ್ನಾಭರಣಗಳಿದ್ದ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

ತೀರ್ಥಹಳ್ಳಿ ಮೂಲದ ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಬಿ.ಜಿ. (32) ಎಂದು ಗುರುತಿಸಲಾಗಿದೆ. ಈತನಿಂದ ಕಳವು ಮಾಡಿದ ಚಿನ್ನಾಭರಣಗಳಾದ 7½ ಪವನ್ ಚಿನ್ನದ ಚೈನ್, 3 ಪವನ್ ತೂಕದ ಎರಡು ಚಿನ್ನದ ಬಳೆ, 1½ ಪವನ್ ಚಿನ್ನದ ಚೈನ್, ½ ಪವನ್ ಚಿನ್ನದ ಬಳೆ, 1 ಪವನ್ ತೂಕದ 4 ಜೊತೆ ಚಿನ್ನದ ಕಿವಿ ಓಲೆ ಸಹಿತ ಒಟ್ಟು 13½ ಪವನ್ (108 ಗ್ರಾಂ) ವಶಕ್ಕೆ ಪಡೆಯಲಾಗಿದೆ.

ಕಾಸರಗೋಡು ಮೂಲದ ಸುರತ್ಕಲ್ ನಿವಾಸಿ ಪ್ರವೀಣ್ ಎನ್ನುವರು ಪತ್ನಿಯೊಂದಿಗೆ ಜೂ.4ರಂದು ತನ್ನ ಬಾಡಿಗೆ ಮನೆಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದು ಮನೆಯಲ್ಲಿ ಯಾರು ಇಲ್ಲದ ಕಾರಣ ಪತ್ನಿ ಮನೆಯಲ್ಲಿದ್ದ 13 ½ ಪವನ್ ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿಟ್ಟುಕೊಂಡು ಬಂದಿದ್ದು ದೇವರ ದರ್ಶನ ಮಾಡಿ ಹೊರಗಡೆ ಬಂದಾಗ ವ್ಯಾನಟಿ ಬ್ಯಾಗ್ ಜೀಪ್ ಓಪನ್ ಆಗಿದ್ದು ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳವಾಗಿದ್ದು ಅದರಲ್ಲಿದ್ದ 4 ಲಕ್ಷದ 75 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚಿಂದ್ರ ಹಾಕೆ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ ಟಿ., ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಕೊಲ್ಲೂರು ಠಾಣೆ ಉಪನಿರೀಕ್ಷಕರಾದ ಜಯಶ್ರೀ, ಸುಧಾರಾಣಿ, ಸಿಬ್ಬಂದಿಗಳಾದ ನಾಗೇಂದ್ರ ಹಾಗೂ ಸಂದೀಪ್ ಈ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button