Crime

ಲಾಲೂ ಸ್ಥಿತಿ ಇನ್ನಷ್ಟು ಗಂಭೀರ

ರಾಂಚಿ,ಜ.23:- ರಾಷ್ಟ್ರೀಯ ಜನತಾದಳ (ಆರ್‍ಜೆಡಿ) ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸುಧಾರಣೆ ಆಗದಿದ್ದಲ್ಲಿ ಶನಿವಾರ ಅಥವಾ ಭಾನುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಬಹು ಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಲಾಲೂ ಪ್ರಸಾದ್ ಹಲವು ತಿಂಗಳಿಂದ ಅನಾರೋಗ್ಯ ಪೀಡಿತರಾಗಿದ್ದಾರೆ. ಶ್ವಾಸಕೋಶಲ್ಲಿ ಅಲರ್ಜಿ ಉಂಟಾಗಿರುವುದಾಗಿ ಈ ಹಿಂದೆ ತಿಳಿಸಲಾಗಿತ್ತು. ಅದೇ ಸಮಸ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪತ್ನಿ ಮತ್ತು ಮಕ್ಕಳು ಆಸ್ಪತ್ರೆಗೆ ದೌಡಾಯಿಸಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button