
ಅಕ್ರಮ ಜಿಲೆಟಿನ್ ಸ್ಪೋಟದ ಆರೋಪ R.R.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು
ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ R.R.ನಗರ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪ ಹಿನ್ನೆಲೆ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ದೂರಿನ ಮೇರೆಗೆ FIR ದಾಖಲಾಗಿದೆ.
ದೂರಿನ ಮೇರೆಗೆ ಇದೀಗ ಎಫ್ಐಆರ್(FIR) ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜೊತೆಗೆ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಜಿಲೆಟಿನ್ ಸ್ಫೋಟ ಮಾಡಿದ ಆರೋಪ ಕೇಳಿಬಂದಿತ್ತು.
ಇನ್ನು ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅವರು ದೂರು ದಾಖಲು ಮಾಡಿದ್ದರು. ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.




