
Shivamogga
ಶಿವಮೊಗ್ಗ: ಲೈಂಗಿ ಕಿರುಕುಳದ ಆರೋಪ – ಪಾದ್ರಿಯ ಬಂಧನ
ಶಿವಮೊಗ್ಗ, ಜು.21: ನಗರದ ಖ್ಯಾತ ಚರ್ಚ್ ಒಂದರ ಪ್ಯಾರಿಷ್ ಪಾದ್ರಿ ಹಾಗೂ ಖಾಸಗಿ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫೆರ್ನಾಂಡಿಸ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪವಿದ್ದು, ಪಾದ್ರಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಕೋಟೆ ಪೊಲೀಸರು ಪಾದ್ರಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಗರದ ಮೊದಲ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಪಾದ್ರಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.




